BIGG NEWS : ರಾಜ್ಯ ಸರ್ಕಾರ `ಆಲ್ಕೋ ಹಾಲಿನ’ ಬಳಿಕ ಹಾಲಿನ ದರವನ್ನೂ ಹೆಚ್ಚಿಸಿದೆ : ಟ್ವಿಟರ್ ನಲ್ಲಿ ಮಾಜಿ ಸಿಎಂ HDK ಕಿಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆಲ್ಕೋ ಹಾಲಿನ ಬೆಲೆ ಏರಿಸಿದ ನಂತರ ಹಾಲಿನ ಬೆಲೆಯನ್ನೂ ಲೀಟರ್ ಗೆ 3 ರೂ. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ,  ಆಲ್ಕೊಹಾಲಿನ ಬೆಲೆ ಏರಿಸಿದ ನಂತರ  ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದರು.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read