
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ‘ನಾವೇನು ಕೈ ಕಟ್ಟಿ ಕುಳಿತಿಲ್ಲ, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಈಗಾಗಲೇ ಸರ್ಕಾರವಾಗಿರಬಹುದು ಅಥವಾ ಸರ್ಕಾರ ಹೊರತುಪಡಿಸಿ ವೈಯಕ್ತಿಕವಾಗಿ ಕೂಡ ನಿಂದನೆ ಮಾಡುತ್ತಿದ್ದಾರೆ. ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಈಗಾಗಲೇ ರಾಜ್ಯದಲ್ಲಿ ಅಂದಾಜು 18 ಪ್ರಕರಣಗಳು ಇದ್ದು, 7 ಎಫ್ಐಆರ್ ದಾಖಲಾಗಿದೆ ಎಂದು ಹೇಳಿದರು

