
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಲವು ವರ್ಷಗಳಿಂದ ಸೈಕಲ್ ವಿತರಣೆ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆ ಪುನಾರಂಭಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಹಾಗೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೆ ತಂದ ಉಚಿತ ಬೈಸಿಕಲ್ ವಿತರಣೆ ಯೋಜನೆಯನ್ನು ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ ಸೈಕಲ್ ವಿತರಣೆ ಯೋಜನೆ ಸ್ಥಗಿತದಿಂದಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಬಹಳ ತೊಂದರೆಯಾಗಿತ್ತು. ಸೈಕಲ್ ವಿತರಣೆ ಯೋಜನೆಯನ್ನು ಮುಂದುವರಿಸಬೇಕು ಎಂಬ ಒತ್ತಾಯ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ.

