HomeKarnatakaBIG NEWS : ಮತ್ತೆ ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ : ಸಚಿವ ಮಧು...

BIG NEWS : ಮತ್ತೆ ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ : ಸಚಿವ ಮಧು ಬಂಗಾರಪ್ಪ ಹೇಳಿಕೆ

ಮಂಗಳೂರು : ಪೂರ್ಣವಾಗಿ ಪಠ್ಯ ಪುಸ್ತಕದ ಪರಿಷ್ಕರಣೆ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಮಕ್ಕಳ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ತೀರ್ಮಾನ ಕೈಗೊಂಡಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ಮಕ್ಕಳ ಭವಿಷ್ಯ ಚೆನ್ನಾಗಿರಲಿ ಎಂದು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಚಿವರು ಹೇಳಿದರು. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ ಎಂದರು. ಪೂರ್ಣವಾಗಿ ಪಠ್ಯ ಪುಸ್ತಕದ ಪರಿಷ್ಕರಣೆ ಆಗಲಿದೆ ಎಂದು ಹೇಳಿದರು. ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ ಎಂದು ಸಚಿವರು ಹೇಳಿದರು.

ಈಗಾಗಲೇ ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ.ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠ ಕೈ ಬಿಡಲಾಗಿದೆ. ಸಮಾಜ ವಿಜ್ಞಾನದಲ್ಲಿ 9 ಪಾಠಗಳಿಗೆ ಕೊಕ್ ನೀಡಲಾಗಿದೆ. ನಿಜವಾದ ಆದರ್ಶ ಪುರುಷ ಯಾರಾಗಬೇಕು ಎನ್ನುವ ಪಠ್ಯವನ್ನು ಕೈ ಬಿಡಲಾಗಿದೆ. ಕೇಶವ ಬಲಿರಾಮ ಹೆಡ್ಗೇವಾರ್ ಬರೆದಿದ್ದ ಗದ್ಯವನ್ನು ಸರ್ಕಾರ ಕೈಬಿಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಕ್ರವರ್ತಿ ಸೂಲಿಬೆಲೆ ಅವರ ತಾಯಿ ಭಾರತೀಯ ಅಮರ ಪುತ್ರರು ಪಾಠಕ್ಕೆ ಕತ್ತರಿ ಹಾಕಲಾಗಿದೆ. ಶತಾವಧಾನಿ ಆರ್. ಗಣೇಶ್ ಗದ್ಯವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠಕ್ಕೆ ಸರ್ಕಾರದಿಂದ ಕೊಕ್ ನೀಡಲಾಗಿದೆ.ನಿರ್ಮಲಾ ಸುರತ್ಕಲ್, ರಮಾನಂದ ಆಚಾರ್ಯ ಅವರ ಪಾಠವನ್ನು ಕೂಡ ಕೈ ಬಿಡಲಾಗಿದೆ. ಪಾರಂಪಳ್ಳಿ ನರಸಿಂಹ ಐತಾಳ, ಲಕ್ಷ್ಮೀಶ ಕೆ.ಟಿ. ಗಟ್ಟಿ, ಪಿ ಸತ್ಯನಾರಾಯಣ ಭಟ್ಟರ ಗದ್ಯಕ್ಕೂ ರಾಜ್ಯ ಸರ್ಕಾರ ಕತ್ತರಿ ಹಾಕಿದೆ.ಸಾವಿತ್ರಿಬಾಯಿ ಪುಲೆ, ನೆಹರೂ, ಡಾ. ಅಂಬೇಡ್ಕರ್ ಅವರ ಪಠ್ಯಗಳನ್ನು ಸೇರ್ಪಡೆ ಮಾಡಲಾಗಿದೆ. ಸುಕುಮಾರಸ್ವಾಮಿ ಕುರಿತ ಪಠ್ಯ ಸೇರಿಸಲಾಗಿದೆ. ಸಾರಾ ಅಬೂಬಕ್ಕರ್, ವನಮಾಲ ರಂಗನಾಥ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ. ಮಹರ್ಷಿ ವಾಲ್ಮೀಕಿ, ಉರುಸ್ ಗಳಲ್ಲಿ ಭಾವೈಕ್ಯತೆ ಪಾಠವನ್ನು ಸೇರ್ಪಡೆ ಮಾಡಲಾಗಿದೆ.
ಸಮಾಜ ವಿಜ್ಞಾನ ಪಠ್ಯದಲ್ಲಿಯೂ ಹಲವು ಅಧ್ಯಾಯಗಳನ್ನು ಸರ್ಕಾರ ಸೇರ್ಪಡೆ ಮಾಡಿದೆ. ವೇದಕಾಲದ ಸಂಸ್ಕೃತಿ, ಹೊಸ ಧರ್ಮಗಳ ಉದಯ ಕುರಿತ ಅಧ್ಯಾಯ, ಮಿರ್ಜಾ ಇಸ್ಮಾಯಿಲ್, ವಿಶ್ವೇಶ್ವರಯ್ಯ, ಒಡೆಯರ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular