ಮಂಡ್ಯ : ಸಿಎಂ ಸ್ಥಾನದ ಬಗ್ಗೆ ಸೋನಿಯಾ, ರಾಹುಲ್ ಗಾಂಧಿ ನಿರ್ಧಾರ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಗೆ ಸಚಿವ ಜಮೀರ್ ಅಹಮದ್ ಟಾಂಗ್ ನೀಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಜಮೀರ್ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದರು.
ಸಿಎಂ ಮಾಡೋದು ಬಿಡೋದು ಅವರ ಕೈಲೂ ಇಲ್ಲ, ನನ್ನ ಕೈಲೂ ಇಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆ ನಿರ್ಧಾರವನ್ನು ಮಾಡುತ್ತಾರೆ ಎಂದರು. ಬಿಜೆಪಿ, ಜೆಡಿಎಸ್ ನಡುವೆ ಹೊಂದಾಣಿಕೆ ಬಗ್ಗೆ ಅವರನ್ನೇ ಕೇಳಿ, ನನಗೆ ಏನೂ ಗೊತ್ತಿಲ್ಲ ಎಂದರು.
’ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು ’ ಎಂಬ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನವಿರುವುದು ನಿಜ. ಸ್ವಲ್ಪ ಕಾದು ನೋಡಿ. ರಾಜಕಾರಣದಲ್ಲಿ ಮುಂದೆ ಏನೆಲ್ಲ ಆಗಲಿದೆ ಎಂಬುದನ್ನು ಎಂದು ಮಾರ್ಮಿಕವಾಗಿ ನುಡಿದರು. ಇದೇ ವೇಳೆ ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು ಎಂಬ ಹೇಳಿಕೆ ವಿಚಾರವಾಗಿ, ನನ್ನ ಹೇಳಿಕೆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ಕೊಡಲ್ಲ. ಹೇಳಿದ ಮೇಲೆ ಅದನ್ನು ವಾಪಸ್ ತೆಗೆದುಕೊಳ್ಳುವ ಜಾಯಮಾನ ನನ್ನದಲ್ಲ. ಹೇಳಿದಿನಿ ಅಂದ್ರೆ ಹೇಳಿದಿನಿ ಅಷ್ಟೇ ಎಂದು ಹೇಳಿದ್ದಾರೆ.