ಮಂಗಳೂರು: ರಾಜ್ಯದ ಶಿಕ್ಷಣದ ಇತಿಹಾಸದಲ್ಲಿಯೇ ಈ ಬಾರಿ 25,000 ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 25 ಸಾವಿರ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದ್ದು, ಜುಲೈ 31ಕ್ಕೆ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.
13500 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ಮಾಡುತ್ತೇವೆ. ನೇಮಕಾತಿ ವಿಚಾರ ಕೋರ್ಟ್ ನಲ್ಲಿರುವುದರಿಂದ ಈಪ್ರಕ್ರಿಯೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 50,000 ಶಿಕ್ಷಕರ ಕೊರತೆ ಇದ್ದು, ಈಗಾಗಲೇ 33,000 ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ವರ್ಗಾವಣೆಯ ನಂತರ ಖಾಲಿ ಉಳಿದ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿ ಈ ಬಾರಿ ಕಾರ್ಯನಿರ್ವಹಿಸುಲಾಗುವುದು. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡರೆ ಶಿಕ್ಷಕರ ಕೊರತೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.