ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಬಿರುಗಾಳಿ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಮಳೆ ಅವಾಂತರದಿಂದಾಗಿ ಧಾರವಾಡ-ಹಳಿಯಾಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಬಿರುಗಾಳಿ ಮಳೆಗೆ ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಬೃಹತ್ ಮರ ಉರುಳಿ ಬಿದ್ದಿದ್ದು, ರಸ್ತೆಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸಲಕಿನಕೊಪ್ಪ-ಬಾಡ ಗ್ರಾಮದ ಮಧ್ಯೆ ಮರ ಧರಾಶಾಹಿಯಾಗಿದ್ದು, ಧಾರವಾಡ-ಹಳಿಯಾಳ ನಡುವಿನ ರಸ್ತೆ ಮಾರ್ಗ ಬಂದ್ ಆಗಿದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದಾಗಿ ಮನೆ ಬಿದ್ದ ಕುಟುಂಬದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಇದೇ ವೇಳೆ ಕಲಘಟಗಿ ತಾಲೂಕಿನ ಕಂಬಾರಗಣವಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು, ಸೇತುವೆ ಸಮಸ್ಯೆ ನಿವಾರಣೆಗೆ 1.5 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.