HomeKarnatakaKarnataka Rain : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮೂವರು ಬಲಿ : 9 ಜಿಲ್ಲೆಗಳಿಗೆ ಪ್ರವಾಹದ ಆತಂಕ

Karnataka Rain : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮೂವರು ಬಲಿ : 9 ಜಿಲ್ಲೆಗಳಿಗೆ ಪ್ರವಾಹದ ಆತಂಕ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವಡೆ ಭಾರೀ ಮಳೆಯಿಂದಾದ ಅವಘಡಗಳಲ್ಲಿ ಮೂವರು ಸಾವನ್ನಪ್ಪಿದ್ದು, 9 ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾವೇರಿ, ಭೀಮಾ, ಕೃಷ್ಣೆ, ಭೀಮಾ, ವರದಾ ದೂದ್ ಗಂಗಾ, ಮಲಪ್ರಭಾ, ತುಂಗಾ ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಘಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಹಾವೇರಿಯಲ್ಲಿ ಒಬ್ಬರು ಮೃತಪಟ್ಟರೆ, ಕಲಬುರಗಿ ಜಿಲ್ಲೆಯಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಇಂದೂ ಕೂಡ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಿದೆ. ಅದೇ ರೀತಿ ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular