ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ಜುಲೈ 27ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾನಾಯಕ ಎನ್.ಎಸ್. ಬೋಸರಾಜು ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಗುರುವಾರ ಸಂಜೆ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪ, ವಿಪಕ್ಷಗಳಿಗೆ ತಿರುಗೇಟು ನೀಡುವ ಬಗೆ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ಸಭೆ ಕರೆಯಲಾಗಿದೆ. ಪಕ್ಷ ವಿರೋಧಿ ಹೇಳಿಕೆ ನೀಡುವವರಿಗೂ ಎಚ್ಚರಿಕೆ ಸಂದೇಶ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.