HomeKarnatakaರಾಜ್ಯದ ವಸತಿ ಶಾಲೆಗಳ `ಗುತ್ತಿಗೆ ಶಿಕ್ಷಕರಿಗೆ’ ಭರ್ಜರಿ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳ `ಗುತ್ತಿಗೆ ಶಿಕ್ಷಕರಿಗೆ’ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲು ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂತ ನೀಡಲು ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗಿಯಪೀಠ ಎತ್ತಿ ಹಿಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಕಳೆದ 12 ವರ್ಷಗಳಿಂದ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದ ಹಲವು ಸುತ್ತಿನ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಂಡಂತಾಗಿದೆ. ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕರಿಗೆ ಅನುಕೂಲವಾಗಲಿದೆ. ಹೈಕೋರ್ಟ್ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಲ್ಲಿಸಿದ ಮೇಲ್ಮನವಿ ಆಲಿಸಿದ ವಿಭಾಗಿಯ ಪೀಠದ ನ್ಯಾಯಮೂರ್ತಿ ಅಲೋಕ್ ಅರಾಧೆ, ನ್ಯಾಯಮೂರ್ತಿ ಎ.ಆರ್. ಹೆಗ್ಡೆ ಈ ಆದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular