HomeCrimeBIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ಅರೆಸ್ಟ್

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ಅರೆಸ್ಟ್

ಬೀದರ್: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಗಶಟ್ಟಿ ಕುಲ್ಕರ್ಣಿ ಬಂಧಿತ ಆರೋಪಿ. ಪ್ರಿನ್ಸಿಪಾಲ್ ನಾಗಶೆಟ್ಟಿ, 13ರಿಂದ 15 ವರ್ಷದ ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗಶೆಟ್ಟಿ ಕುಲ್ಕರ್ಣಿ 6 ತಿಂಗಳ ಹಿಂದಷ್ಟೇ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದ. ಜುಲೈ 7ರಂದು ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ನಾಲ್ವರು ವಿದ್ಯಾರ್ಥಿನಿಯರು ಜುಲೈ 20ರಂದು ಪೊಲೀಸರಿಗೆ ದೂರು ನೀಡಿದ್ದರು. ಜುಲೈ 7ರಂದು ತನ್ನ ಹುಟ್ಟುಹಬ್ಬ ಎಂದು ವಿದ್ಯಾರ್ಥಿನಿಯರಿಗೆ ಸ್ಟೀಟ್ ಕೊಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಅಲ್ಲದೇ ವಿದ್ಯಾರ್ಥಿಯೊಬ್ಬಳ ಕೈ ಹಿಡಿದು ಎಳೆದು ಚುಂಬಿಸಿದ್ದಾನೆ ಎಂದು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಚಿಟಗುಪ್ಪ ಪೊಲೀಸರು ಪೋಕ್ಸೋ ಪ್ರಕರಣದಡಿ ನಾಗಶೆಟ್ಟಿ ಕುಲ್ಕರ್ಣಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular