ಬೆಂಗಳೂರು : ಅಪರಿಚಿತರಿಗೆ ಬಾಡಿಗೆ ಮನೆ ಕೊಡುವ ಮುನ್ನ ಎಚ್ಚರವಾಗಿರಬೇಕು. ಬಾಡಿಗೆಗೆ ಮನೆ ಕೊಡುವ ಮುನ್ನ ಅವರ ಹಿನ್ನೆಲೆ ಬಗ್ಗೆ ತಿಳಿದಿರಬೇಕು. ನೈಜೀರಿಯನ್ ಪ್ರಜೆಯೊಬ್ಬ ಬಾಡಿಗೆಗೆ ಮನೆ ಪಡೆದು ಡ್ರಗ್ಸ್ ಮಾರಾಟ ಮಾಡಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
ಬಾಡಿಗೆ ಮನೆಯಲ್ಲಿದ್ದುಕೊಂಡೇ ಅಕ್ರಮವಾಗಿ ಡ್ರಗ್ಸ್ ಸರಬರಾಜು ಮಾಡ್ತಿದ್ದ ನೈಜೀರಿಯನ್ ಪ್ರಜೆಯೊಬ್ಬ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾನೆ. ಮನೆಯಲ್ಲಿದ್ದ ಸಿಲಿಂಡರ್ ತಳದಲ್ಲೇ ಡ್ರಗ್ಸ್ ಸ್ಟೋರೇಜ್ ಮಾಡಿದ್ದ ಕಿಲಾಡಿ, ಕಚ್ಚಾ ವಸ್ತುವಿನಿಂದ ಕ್ಲಾಸಿ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಗೋವಾ ಹಾಗೂ ಮಹಾರಾಷ್ಟ್ರದ ಕಡೆಯಿಂದ ಶುದ್ಧ ಕಚ್ಛಾ ವಸ್ತುಗಳನ್ನ ತರಿಸಿಕೊಂಡು ಡ್ರಗ್ಸ್ ತಯಾರು ಮಾಡ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.