HomeKarnatakaUdupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ

Udupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ


ಉಡುಪಿ : ರೀಲ್ಸ್ ಹುಚ್ಚಾಟಕ್ಕೆ ಯುವಕ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ನಡೆದಿದೆ.

ಮೃತನನ್ನು ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂದು ಗುರುತಿಸಲಾಗಿದೆ. ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ತಿಳಿದು ಬಂದಿದೆ. ಸ್ನೇಹಿತನ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯುವಕನ ಮೃತದೇಹ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ, ಫಾಲ್ಸ್ ಗಳು ತುಂಬಿ ಹರಿಯುತ್ತಿದ್ದು, ಮಳೆಗಾಲಯದಲ್ಲಿ ಯುವಕರು ಎಚ್ಚರದಿಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular