HomeKarnatakaGruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು,...

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು, ‘SMS’ ಗಾಗಿ ಕಾಯುವ ಅವಶ್ಯಕತೆಯಿಲ್ಲ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೋಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸಲಾಗುತ್ತದೆ.ಮೊದಲಿಗೆ ಹೆಡ್ ಆಫ್ ದ ಫ್ಯಾಮಿಲಿ ಆಧಾರ್ ಕಾರ್ಡ್ ಅಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಮೊಬೈಲ್ ಸಂಖ್ಯೆಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ಮೂಲಕ ಕಳುಹಿಸಬೇಕು.SMS ಕಳುಹಿಸಿದ ಕೆಲವೇ ಕ್ಷಣಗಳಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಒಂದು ವೇಳೆ ಮೆಸೇಜ್ ಬಾರದಿದ್ದರೆ ಅದು ಸರ್ವರ್ ಸಮಸ್ಯೆ ಆಗಿರುತ್ತದೆ, ಆದ್ದರಿಂದ ಮತ್ತೆ ನೀವು ಸಂದೇಶ ಕಳುಹಿಸಬೇಕು. ನಿಮಗೆ SMS ಮೂಲಕ ಯಾವ ಗ್ರಾಮದಲ್ಲಿ ಯಾವ ಕೇಂದ್ರದಲ್ಲಿ ಯಾವ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಬರುತ್ತದೆ.

ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರು ಅರ್ಜಿ ಸಲ್ಲಿಸಲು ಇನ್ನು ಮುಂದೆ ಸ್ಲಾಟ್ ಬುಕ್ಕಿಂಗ್ ಗಾಗಿ SMS ಅನ್ನು ಕಾಯುವ ಅವಶ್ಯಕತೆ ಇಲ್ಲ. ಬದಲಾಗಿ ನೇರವಾಗಿಯೇ ಹೋಗಿ ಫಲಾನುಭವಿಗಳು ತಮಗೆ ಹತ್ತಿರದಲ್ಲಿರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ನೀವು ನಿಮ್ಮ ಒಟಿಪಿ ಬರುವ ಮೊಬೈಲ್ ತೆಗೆದುಕೊಂಡು ಹೋಗಿ ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಬಹುದು. ನೇರವಾಗಿ ಪೂರಕ ದಾಖಲೆಗಳ ಜೊತೆ ಹೋಗಿ ಇಂದಿನಿಂದಲೇ ಈ ಮೇಲೆ ತಿಳಿಸಿದ ಸೇವಾಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಮೆಸೇಜ್ ಗೆ ರಿಪ್ಲೈ ಬಂದಿಲ್ಲ ಎಂದರೆ ತಾಂತ್ರಿಕ ಸಮಸ್ಯೆಯಿಂದ ಹೀಗಾಗಿರಬಹುದು. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ https://sevasindhugs.karnataka.gov.in/ ಗೆ ಭೇಟಿ ನೀಡಿ ನಿಮ್ಮ ಪಡಿತರ ಚೀಟಿ ಸಂಖ್ಯೆ ಹಾಗೂ ಕ್ಯಾಪ್ಚಾ ನಮೂದಿಸಿ ನೀವು ಅರ್ಜಿ ಸಲ್ಲಿಸುವ ವೇಳಾಪಟ್ಟಿ ಚೆಕ್ ಮಾಡಿಕೊಳ್ಳಬಹುದು.

ಸರ್ಕಾರ ಈ ಮೊದಲು 8147500500 ಸಹಾಯವಾಣಿ ಸಂಖ್ಯೆಗೆ SMS ಕಳುಹಿಸಿ ಸ್ಲಾಟ್ ಬುಕಿಂಗ್ ಸೂಚಿಸಿತ್ತು, ಈಗ ಮತ್ತೊಂದು ಸಹಾಯವಾಣಿ ಸಂಖ್ಯೆಯನ್ನು ಕೂಡ ನೀಡಿದೆ. 8277000555 ಸಹಾಯವಾಣಿ ಸಂಖ್ಯೆಗೂ ಕೂಡ ಪಡಿತರ ಚೀಟಿ ಸಂಖ್ಯೆಯನ್ನು SMS ಮಾಡಿ ನೋಂದಣಿ ವೇಳಾಪಟ್ಟಿ ಪಡೆದುಕೊಳ್ಳಬಹುದು.ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular