ಮಂಡ್ಯ : ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನದ ಚುನಾವಣೆ ಕಾಂಗ್ರೆಸ್ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಬೋರೇಗೌಡ ಮನ್ಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ತೀವ್ರ ಪೈಪೋಟಿ ಏರ್ಪಟಿತ್ತು. ಬಿಜೆಪಿ ಬೆಂಬಲಿತ ನಿರ್ದೇಶಕ ಸ್ವಾಮಿಅವರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಮನ್ಮುಲ್ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದೆ.
ಕೋರಂ ಪ್ರಭಾವ ಉಂಟಾಗಲಿ ಎಂಬ ಕಾರಣಕ್ಕೆ ಜೆಡಿಎಸ್ ಗೈರಾಗಿತ್ತು. ಇಂದು ಸಹ ಚುನಾವಣೆಗೆ ಜೆಡಿಎಸ್ ಗೈರಾಗಿತ್ತು. ಜೆಡಿಎಸ್ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ರೂಪಿಸಿ ಕೊನೆಗೂ ಮನ್ಮೂಲ್ ಅಧ್ಯಕ್ಷ ಸ್ಥಾನವನ್ನು ತಕ್ಕೆಗೆ ಬೀಳಿಸಿಕೊಂಡಿದೆ.
ಕೋರಂ ಕೊರತೆಯಿಂದಾಗಿ ಮುಂದೂಡಲ್ಪಟ್ಟಿದ್ದ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಮನ್ಮುಲ್) ಅಧ್ಯಕ್ಷ ಸ್ಥಾನದ ಚುನಾವಣೆಗೆ ಮತ್ತೆ ಜುಲೈ 24ರಂದು ಮುಹೂರ್ತ ನಿಗದಿ ಮಾಡಲಾಗಿತ್ತು.. ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ನಡುವೆ ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು.