alex Certify BREAKING : ವಾರಣಾಸಿ ‘ಜ್ಞಾನವ್ಯಾಪಿ ಮಸೀದಿ’ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಾರಣಾಸಿ ‘ಜ್ಞಾನವ್ಯಾಪಿ ಮಸೀದಿ’ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗಲು ಸೋಮವಾರ ಅನುಮತಿ ನೀಡಿದೆ.

ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ತಾತ್ಕಾಲಿಕ ತಡೆ ನೀಡಿದೆ. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನಗಳನ್ನು ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜುಲೈ 26 ರ ಸಂಜೆ 5 ಗಂಟೆಯವರೆಗೆ ಜಾರಿಗೊಳಿಸಬಾರದು ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ನಿರ್ದೇಶಿಸಿದೆ. ಕನಿಷ್ಠ ಒಂದು ವಾರದವರೆಗೆ ಮಸೀದಿ ಆವರಣದಲ್ಲಿ ಯಾವುದೇ ಉತ್ಖನನ ಕಾರ್ಯಗಳನ್ನು ಮಾಡಲಾಗುವುದಿಲ್ಲ ಎಂಬ ಸಾಲಿಸಿಟರ್ ಜನರಲ್ ಅವರ ಸಲ್ಲಿಕೆಗಳನ್ನು ಸಿಜೆಐ ಗಮನಿಸಿದರು. ಸುಪ್ರೀಂ ಕೋರ್ಟ್ ತಡೆಯಾಜ್ಞೆಗೆ ಪ್ರತಿಕ್ರಿಯಿಸಿದ ಡಿಎಂ ವಾರಣಾಸಿ, “ನಾವು ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿರುತ್ತೇವೆ” ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...