HomeKarnatakaBIG NEWS: ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡ್ತಿದ್ದಾರೆ; ಮಾಜಿ ಸಿಎಂ HDK ವಿರುದ್ಧ...

BIG NEWS: ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡ್ತಿದ್ದಾರೆ; ಮಾಜಿ ಸಿಎಂ HDK ವಿರುದ್ಧ DCM ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಕಿಡಿ ಕಾರಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಮಗೆ ಬಂದಿರುವ ಮಾಹಿತಿ ಪ್ರಕಾರ, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ಅವರೇನೋ ತಂತ್ರ ರೂಪಿಸ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ಹೋಗಿ ಷಡ್ಯಂತ್ರ ಮಾಡ್ತಿದ್ದಾರೆ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ವಿಚಾರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular