HomeKarnatakaBIG NEWS: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ...

BIG NEWS: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಂದಾಯ ಶಿರಸ್ತೇದಾರ್

 

ಶಿವಮೊಗ್ಗ: ನಿವೇಶನ ಖಾತೆ ಬದಲಾವಣೆಗೆ ಲಂಚಕ್ಕೆ ಕೈಯೊಡ್ಡಿದ್ದ ಕಂದಾಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಂದಾಯ ಶಿರಸ್ತೇದಾರ್ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿವೇಶನ ಖಾತೆ ಬದಲಾವಣೆಗಾಗಿ ಹನುಮಂತ ಎಂಬುವವರಿಂದ 3 ಲಕ್ಷ ರೂಪಾಯಿ ಹಣಕ್ಕೆ ಅರುಣ್ ಕುಮಾರ್ ಬೇಡಿಕೆ ಇಟ್ಟಿದ್ದರು. ಹನುಮಂತ ಎಂಬುವವರಿಂದ 1.5 ಲಕ್ಷ ಹಣ ಪಡೆಯುತ್ತಿದ್ದಾಗ ಅರುಣ್ ಕುಮಾರ್ ನನ್ನು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ಅರುಣ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular