HomeKarnatakaBREAKING NEWS : 'ಕರ್ನಾಟಕ ಹೈಕೋರ್ಟ್' ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ :...

BREAKING NEWS : ‘ಕರ್ನಾಟಕ ಹೈಕೋರ್ಟ್’ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕ್ ಕೈವಾಡ ಶಂಕೆ

ಬೆಂಗಳೂರು : ಹೈಕೋರ್ಟ್ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಬಂದಿದ್ದು, ಹಣಕ್ಕಾಗಿ ಡಿಮ್ಯಾಂಡ್ ಮಾಡಲಾಗಿದೆ.

ಹೈಕೋರ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ ಮುರಳೀದರ್ ಗೆ ಈ ಸಂದೇಶ ಬಂದಿದ್ದು, 50 ಲಕ್ಷ ರೂ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ. ಪಾಕ್ ಮೂಲದ ಬ್ಯಾಂಕ್ ಖಾತೆ ನಂಬರ್ ನೀಡಲಾಗಿದ್ದು, ಅಲೈಡ್ ಬ್ಯಾಂಕ್ ಖಾತೆ ಸಂಖ್ಯೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಣ ನೀಡದಿದ್ದರೆ ಹೈಕೋರ್ಟ್ ನ 6 ಮಂದಿ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ವಾಟ್ಸಾಪ್ ನಲ್ಲಿ ಕೊಲೆ ಬೆದರಿಕೆಯೊಡ್ಡಲಾಗಿದೆ ಎಂದು ಹೇಳಲಾಗಿದೆ.

ಪರಾರಿಯಾಗಿರುವ ಶಂಕಿತ ಉಗ್ರ ಜುನೈದ್ ಪತ್ತೆಗಾಗಿ ‘ಔಟ್ ಲುಕ್’ ನೋಟಿಸ್ ಜಾರಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಆರೋಪಿ -2 ಜುನೈದ್ ಪತ್ತೆಯಾಗಿ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಜುನೈದ್ ಎಂಬಾತನ ಪತ್ತೆಗಾಗಿ ಬೆಂಗಳೂರು ಪೊಲೀಸರು ಔಟ್ ಲುಕ್ ಜಾರಿಗೊಳಿಸಿದ್ದು, ಆತ ದುಬೈನಲ್ಲಿ ತಲೆಮರೆಸಿಕೊಂಡಿದ್ದಾಗಿ ಎನ್ನಲಾಗಿದೆ.
ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಐವರು ಶಂಕಿತ ಉಗ್ರರ ಬಳಿ ಸಿಕ್ಕಿರುವುದು ವಾಕಿಟಾಕಿಗಳಲ್ಲ, ಬದಲಿಗೆ ಅವು ಸುಧಾರಿತ ಸ್ಪೋಟಕಗಳನ್ನು ಸ್ಪೋಟಿಸಲು ಅನುಕೂಲವಾಗುವಂತೆ ಮಾರ್ಪಾಡುಗೊಳಿಸಿದ ಡಿವೈಸ್ ಗಳು ಎಂಬ ಅನುಮಾನ ಮೂಡಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular