alex Certify Heavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Heavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ವರುಣಾರ್ಭಟ ಮುಂದುವರೆದಿದ್ದು,  ಜಿಲ್ಲೆಯಾದ್ಯಂತ ನಾಳೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಾಳೆಯೂ (ಜುಲೈ 25)   ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಸತತ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...