HomeKarnatakaದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆಯೂ ರಜೆ ಘೋಷಣೆ

ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆಯೂ ರಜೆ ಘೋಷಣೆ

ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ನೀಡಲಾಗಿದೆ.

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜುಲೈ 25 ರಂದು ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ  ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಉಡುಪಿಯಲ್ಲಿ ಹವಾಮಾನ ಇಲಾಖೆ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿ ಕಟ್ಟಿ ರಜೆ ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕುಗಳಲ್ಲಿ ಶಾಲೆಗಳಿಗೆ, ಅಂಗನವಾಡಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular