HomeKarnatakaBREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ನಡೆದ ಅಪಘಾತದಲ್ಲಿ ಸಕಲೇಶಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಕುಮಾರ್ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular