HomeKarnatakaBIGG NEWS : ರಾಜ್ಯದಲ್ಲಿ ಮಳೆ ಅವಾಂತರ : ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

BIGG NEWS : ರಾಜ್ಯದಲ್ಲಿ ಮಳೆ ಅವಾಂತರ : ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಬೆಳೆ ಪರಿಸ್ಥಿತಿಯ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು ಸೇರಿ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ರಸ್ತೆ, ಸೇತುವೆ, ಬೆಳೆ, ಜೀವಹಾನಿ ಆಗಿದ್ದು, ಸಿಎಂ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ 50 ಕಿಲೋಮೀಟರ್ ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಸ್ವಲ್ಪ ಕಡಿಮೆಯಾದರೂ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಂಭವ ಇದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular