HomeKarnatakaBIG NEWS:ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

BIG NEWS:ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಹಲವೆಡೆ ಸೇತುವೆ, ರಸ್ತೆ ಸಂಪರ್ಕಗಳು ಜಲಾವೃತಗೊಂಡಿದ್ದು, ಮಾರ್ಗಗಳೇ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವ ವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೀಘ್ರದಲ್ಲಿಯೇ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular