ಬೆಂಗಳೂರು: ಬಿಜೆಪಿಯಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ಕಾರಣಾಂತರಗಳಿಂದ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಲೇ ಇದೆ. ಆದರೂ ರಾಜ್ಯ ಬಿಜೆಪಿ ನಾಯಕರು ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವೆಡೆ ಬರದ ಛಾಯೆ ಆವರಿಸಿದೆ. ನೆರೆ ಹಾಗೂ ಬರ ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಪ್ರತ್ಯೇಕ ತಂಡಗಳಾಗಿ ತೆರಳಿ ಪರಿಶೀಲಿಸಲು ಬಿಜೆಪಿ ನಿರ್ಧರಿಸಿದೆ.
ಸಿಎಂ ಸಿದ್ದರಾಮಯ್ಯ, ಸಚಿವರುಗಳ ಪ್ರವಾಸಕ್ಕೂ ಮುನ್ನವೇ ಬಿಜೆಪಿ ರಾಜ್ಯಮಟ್ಟದ ಪದಾಧಿಕಾರಿಗಳ ತಂಡದಿಂದ ನೆರೆ ಕುರಿತು ಪ್ರವಾಸ ಮಾಡಲಿದ್ದಾರೆ. ಬಳಿಕ ತಂಡ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಧ್ಯಯನ ವರದಿ ಸಲ್ಲಿಸಲಿದೆ.