alex Certify ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಮನೆ ಕುಸಿದು ಬಿದ್ದು, ಒಂದು ವರ್ಷದ ಕಂದಮ್ಮ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.

ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿತ್ತು. ಇದೀಗ ಮನೆ ಏಕಾಏಕಿ ಕುಸಿದು ಬಿದ್ದಿದ್ದು, ದುರಂತದಲ್ಲಿ ಒಂದು ವರ್ಷದ ಮಗು ಸ್ಫೂರ್ತಿ ಸಾವನ್ನಪ್ಪಿದ್ದಾಳೆ. ಸ್ಫೂರ್ತಿಯ ತಂದೆ ಕೆಂಚಪ್ಪಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಲೇಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...