HomeKarnatakaBIG NEWS : ವಿದ್ಯುತ್ ದರ ಏರಿಕೆ : ಇಂದು 'KERC' ಅಧಿಕಾರಿಗಳ ಜೊತೆ ಸಚಿವ...

BIG NEWS : ವಿದ್ಯುತ್ ದರ ಏರಿಕೆ : ಇಂದು ‘KERC’ ಅಧಿಕಾರಿಗಳ ಜೊತೆ ಸಚಿವ ಕೆ.ಜೆ ಜಾರ್ಜ್ ಮಹತ್ವದ ಸಭೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆದಿತ್ತು. ಇದೀಗ ವಿದ್ಯುತ್ ದರ ಏರಿಕೆ ಸಂಬಂಧ ಇಂದು ಸಚಿವ ಕೆಜೆ ಜಾರ್ಜ್ ಕೆಇಆರ್ಸಿ ( KERC) ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಇಂಧನ ಸಚಿವ ಕೆಜೆ ಜಾರ್ಜ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ಕೆಇಆರ್ಸಿ (KERC) ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ವಿದ್ಯತ್ ದರ ಏರಿಕೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯುತ್ ದರ ಏರಿಕೆಯಿಂದಾಗಿ ಸಣ್ಣ ಕೈಗಾರಿಕೆಗಳು ಶಾಕ್ ಆಗಿದ್ದು, ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿದ್ಯುತ್ ದರ ಏರಿಕೆಯಿಂದ ಉದ್ಯಮ ವಲಯ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ವಿರುದ್ಧ ಎಲ್ಲರೂ ಶಾಪ ಹಾಕುತ್ತಿದ್ದಾರೆ ಎಂದು ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯೋದ್ಯಮ ಸಂಘಟನೆಗಳು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದವು. ಬಂದ್ ಗೆ ಬೆಂಬಲ ಸೂಚಿಸಿ ವರ್ತಕರು, ಎಪಿಎಂಸಿ, ಜವಳಿ ಉದ್ಯಮ, ಬಟ್ಟೆ ಅಂಗಡಿಗಳು, ಸ್ಟೇಷನರಿ, ಹೋಟೆಲ್ ಮಾಲೀಕರು, ಬೇಕರಿ, ಅಂಗಡಿ, ಹಾರ್ಡ್ ವೇರ್, ವ್ಯಾಪಾರಿಗಳ ಸಂಘ, ಕೈಗಾರಿಕಾ ಪ್ರದೇಶದ ಉದ್ಯಮಿಗಳು ಬೆಂಬಲ ವ್ಯಕ್ತಪಡಿಸಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular