
ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.


