ಹುಬ್ಬಳ್ಳಿ : ಜುಲೈ 27 ರಂದು ಕಾಂಗ್ರೆಸ್ ( Congress) ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಜುಲೈ 27 ರಂದು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಶಾಸಕರು ಹಾಗೂ ಸಚಿವರಿಗೆ ಸಭೆಯಲ್ಲಿ ಮಾರ್ಗಸೂಚಿ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ . ಸಚಿವರು, ಶಾಸಕರು ಹಾಜರಿರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಜುಲೈ 27 ರಂದು ಸಚಿವ ಸಂಪುಟ ಸಭೆ
ಬೆಂಗಳೂರು : ಜುಲೈ 27 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.