ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಈ ಹಿನ್ನೆಲೆ ಜೆಸಿಬಿಗಳಿಂದ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಮುಳ್ಳಯ್ಯನಗಿರಿ ಬೆಟ್ಟಕ್ಕೆ ತೆರಳದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ. ಸದ್ಯ, ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1923 ಮೀಟರ್ (೬೩೧೭ ಅಡಿ) ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತಶಿಖರವಾಗಿದೆಮಳೆಗಾಲದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಇಲ್ಲಿಯ ಅನುಭವವೇ ಬೇರೆ ಹಾಗಾಗಿ ಸಾಕಷ್ಟು ಪ್ರವಾಸಿಗರು, ಚಾರಣಿಗರು ಈ ಸಮಯದಲ್ಲಿ ಭೇಟಿ ನೀಡುವುದರಿಂದ ಚಿಕ್ಕಮಗಳೂರು ರಸ್ತೆ ಸದಾ ವಾಹನಗಳಿಂದ ತುಂಬಿರುತ್ತದೆ. ಇಲ್ಲಿನ ಗಿರಿಶಿಖರವನ್ನು ಹತ್ತುವಾಗ ಸಿಗುವ ಸಂತೋಷ ಬೇರೆಲ್ಲೂ ಸಿಗಲಾರದು ಮುಳ್ಳಯ್ಯನಗಿರಿ ಅನ್ನೋ ಹೆಸರೇ ನಿಮ್ಮನ್ನು ಆಕರ್ಷಿಸುತ್ತದೆ. ಮಳೆಗಾಲದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಇಲ್ಲಿಯ ಅನುಭವವೇ ಬೇರೆ ಹಾಗಾಗಿ ಸಾಕಷ್ಟು ಪ್ರವಾಸಿಗರು, ಚಾರಣಿಗರು ಈ ಸಮಯದಲ್ಲಿ ಭೇಟಿ ನೀಡುವುದರಿಂದ ಚಿಕ್ಕಮಗಳೂರು ರಸ್ತೆ ಸದಾ ವಾಹನಗಳಿಂದ ತುಂಬಿರುತ್ತದೆ.