HomeIndiaBIG NEWS : ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ : ಸಕ್ರಿಯ ಪ್ರಕರಣಗಳಲ್ಲಿಯೂ...

BIG NEWS : ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ : ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ


ನವದೆಹಲಿ: ವರುಣಾರ್ಭಟಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಸಾಂಕ್ರಾಮಿಕ ರೋಗ ಭೀತಿ ಶುರುವಾಗಿದೆ. ಈ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 21 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿದ್ದು, 1449 ಪ್ರಕರಣ ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461968 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 427 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ 220,67,50,891 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 47,533 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular