HomeKarnatakaBIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

BIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

ಹುಬ್ಬಳ್ಳಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಕರಂಜೋಲ್ ಬಳಿ ಭೂ ಕುಸಿತವುಂಟಾಗಿದ್ದು, ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಂಜೋಲ್ ಬಳಿ ರೈಲ್ವೆ ಸಿಬ್ಬಂದಿಗಳು, ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಮಣ್ಣು ತೆರವಿನ ಬಳಿಕ ರೈಲು ಸಂಚಾರ ಪುನರಾರಂಭವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular