ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೂವರು ವಿದ್ಯಾರ್ಥಿನಿಯರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿತ್ತು. ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದ್ದು, ವಿದ್ಯಾರ್ಥಿನಿಯರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದೆ.