HomeCrimeBIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

BIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ಮದುವೆಯಾದ 6 ತಿಂಗಳಲ್ಲೇ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೈಡ್ರಾಮಾ ಮಾಡಿದ್ದ ಕಿರಾತಕ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಸಿದ್ದಪ್ಪ ಬಸವರಾಜ್ ಬೆನ್ನೂರು ಬಂಧಿತ ಆರೋಪಿ. ಬೆಂಗಳೂರಿನ ಹೆಚ್ ಆರ್ ಬಿ ಆರ್ ಲೇಔಟ್ ನಲ್ಲಿ ವಾಸವಾಗಿದ್ದ ಸಿದ್ದಪ್ಪ 6 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ. ಪತ್ನಿ ಕೆಂಚಮ್ಮ (19)ಳನ್ನು ತಡರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯನ್ನು ನೇಣು ಬಿಗಿದು, ಬೆಳಿಗ್ಗೆ ನಾಟಕವಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಚಮ್ಮ ಪೋಷಕರು, ಸಂಬಂಧಿಕರಿಗೆ ಕರೆ ಮಾಡಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಣ್ಣೀರಿಟ್ಟಿದ್ದಾನೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ ಅನುಮಾನ ಬಂದಿದೆ. ಪತಿ ಸಿದ್ದಪ್ಪನನ್ನು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವುದು ಗೊತ್ತಾಗಿದೆ.

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಆರೋಪಿ ಸಿದ್ದಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular