ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದೆ. ಗುರುವಾರ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾದಗಿರಿ, ಹಾಸನ, ಶಿವಮೊಗ್ಗ, ವಿಜಯಪುರ, ರಾಯಚೂರು, ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶುಕ್ರವಾರದಿಂದ ಮಳೆಯ ಪ್ರಭಾವ ಕಡಿಮೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.