ಬೆಂಗಳೂರು : ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ಕಂದಾಯ ದಿನಾಚರಣೆ ಮತ್ತು ಕಾರ್ಯಗಾರಕ್ಕೆ ಹಾಜರಾಗಲು ಅತಿ ಮಳೆಯಾಗುತ್ತಿರುವ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಇಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಹಾಜರಾಗುವವರು ವಿಶೇಷ ಸಾಂದರ್ಭಿಕ ರಜೆ ಕೋರಿ ಅರ್ಜಿ ಸಲ್ಲಿಸಬೇಕು. ಸಮಾರಂಭದಲ್ಲಿ ಭಾಗವಹಿಸಿದ್ದ ಬಗ್ಗೆ ಅಧಿಕೃತ ಹಾಜರಿ ಪತ್ರವನ್ನು ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿ ಅವರಿಂದ ಪಡೆದು ಒದಗಿಸಬೇಕು ಎಂದು ಉಲ್ಲೇಖಿಸಲಾಗಿದೆ.