HomeKarnatakaಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಪಿಕೆಪಿಎಸ್, ಡೇರಿ ಕಾರ್ಯದರ್ಶಿಗಳಿಗೆ ಸೇವಾ ಭದ್ರತೆ: ಸಚಿವ ರಾಜಣ್ಣ

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಪಿಕೆಪಿಎಸ್, ಡೇರಿ ಕಾರ್ಯದರ್ಶಿಗಳಿಗೆ ಸೇವಾ ಭದ್ರತೆ: ಸಚಿವ ರಾಜಣ್ಣ

ಕಲಬುರಗಿ: ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ(ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಕಾರ ಇಲಾಖೆಯ ಕಲಬುರಗಿ ಪ್ರಾಂತ್ಯದ ಪ್ರಗತಿ ಪರಿಶೀಲನೆ ಸಭೆ ನಡೆಸಿದ‌ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯನಾಥನ್ ವರದಿ ಪ್ರಕಾರ ಪ್ರತಿ ಗ್ರಾಮ ಪಂಚಾಯತಿ ಕೇಂದ್ರಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇರಬೇಕೆಂದು ತಿಳಿಸಿದ್ದು, ಅದರಂತೆ ಸ್ಥಾಪಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಗ್ರಾಮ ಪಂಚಾಯಿತಿಗೊಂದು ಸಂಘಗಳಿಲ್ಲ. ಎಲ್ಲ ಗ್ರಾಮ ಪಂಚಾಯತಿ ಯಲ್ಲಿ ಸಂಘಗಳು ರಚನೆಯಾದಲ್ಲಿ ಎಲ್ಲ ರೈತರಿಗೆ ಸಮರ್ಪಕ ಸಹಾಯ ಕಲ್ಪಿಸಲು ಅನುಕೂಲವಾಗುತ್ತದೆ. ಹೊ‌ಸ ಸಂಘಗಳ ರಚನೆ ಕಾರ್ಯ ಆದಷ್ಟು ಬೇಗನೇ ಕೈಗೆತ್ತಿಕೊಳ್ಳಲಾಗುವುದು. ಇಂದಿನ ಸಭೆಯಲ್ಲಿ ಡಿಸೆಂಬರ್ ಒಳಗೆ ಗ್ರಾಮ ಪಂಚಾಯಿತಿವಾರು ಸಂಘಕ್ಕೆ  ಗ್ರಾಮ ಪಂಚಾಯತಿವಾರು ಗಡಿ ಗುರುತಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅಲ್ಪವಾಧಿ ಮತ್ತು ದೀರ್ಘಾವಧಿ ಸಾಲದ ಮಿತಿ ಹೆಚ್ಚಳ

ಡಿ.ಸಿ.ಸಿ. ಬ್ಯಾಂಕುಗಳಿಂದ ನೀಡಲಾಗುವ ಶೂನ್ಯ ಬಡ್ಡಿ ದರದಲ್ಲಿನ ಅಲ್ಪಾವಧಿ ಸಾಲ 3 ರಿಂದ 5 ಲಕ್ಷ ರೂ.ಗಳಿಗೆ ಮತ್ತು ಶೇ.3ರ‌ ಬಡ್ಡಿ ದರದ ದೀರ್ಘಾವಧಿ ಸಾಲ 10 ರಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಿದ್ದು, ಇದರಿಂದ ರೈತರು ಕೃಷಿಯೊಂದಿಗೆ ಉಪ ಕಸುಬು ಕೈಗೊಳ್ಳಲು ಸಹಕಾರಿಯಾಗಲಿದೆ ಎಂದರು.

ಸೇವಾ ಭದ್ರತೆ

ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಅಥವಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ  ಜತೆಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು  ಸಹಕಾರ ಸಂಘದ 128( ಎ) ಅನ್ವಯ ಸೇವಾ ಭದ್ರತೆ ಕಲ್ಪಿಸಲು ಉದ್ದೇಶಿಸಲಾಗಿದೆ. ಪಿಕೆಪಿಸ್ ಆಡಳಿತ ಮಂಡಳಿ ಅವಕೃಪೆಗೆ ಒಳಗಾದರೆ ಕಾರ್ಯದರ್ಶಿ ಮನೆಗೆ ಹೋಗುವ ಪರಿಸ್ಥಿತಿ ಈಗಿದೆ. ಇದನ್ನು ತಪ್ಪಿಸಲು ಮತ್ತು ಅವರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜತೆಗೇ ಕೆಲವು ಜವಾಬ್ದಾರಿಗಳನ್ನು ವಹಿಸಲು ರೂಪು ರೇಷೆ ಸಿದ್ಧಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

6,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳು ಹಾಗೂ 15,500 ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಯಾವ ಮಾನದಂಡದ ಮೇಲೆ ಸೇವಾ ಭದ್ರತೆ ಕಲ್ಪಿಸಬೇಕೆಂಬುದನ್ನು ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಅವ್ಯವಹಾರ ತನಿಖೆಗೆ

ಸಹಕಾರ ಇಲಾಖೆಯಲ್ಲಿ ನಡೆದ ಅವ್ಯವಹಾರ ತನಿಖೆ ನಡೆಯುತ್ತವೆ. ಆದರೆ ಮುಂದೆ ಕ್ರಮ ಜರುಗುವುದಿಲ್ಲ ಎಂಬ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಸಾಲ ಹಂಚಿಕೆಯಲ್ಲಿ ಎಸಗಿರುವ ಅವ್ಯಹಾರ ಅವ್ಯವಹಾರ ಹಗರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅವ್ಯವಹಾರ ಹಣ ಅವ್ಯವಹಾರ ಎಸಗಿರುವ ಸಿಬ್ಬಂದಿಗಳ ಆಸ್ತಿ ಮುಟ್ಟುಗೋಲು ಹಾಕಿ ಹಣ ವಸೂಲಿ ಮಾಡಲಾಗುವುದು.  ಯಾರೇ ಎಷ್ಟೇ ದೊಡ್ಡವರಿದ್ದರೂ ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular