
ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿರುವ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಪರ್ಯಾಯ ಮಾರ್ಗವಾಗಿ ವಾಹನಗಳು ಈ ಕೆಳಗಿನ ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದ್ದು, ಭಾರಿ ವಾಹನ ಸಂಚಾರ ನಿರ್ಬಂಧ ನಿಷೇಧಿಸಲಾಗಿದೆ. ವಾಹನ ಸವಾರರು ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್- ಕಾರ್ಕಳ- ಉಡುಪಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಹಾಗೂ ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಕೂಡ ಸಂಚರಿಸಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

