ಹುಬ್ಬಳ್ಳಿ : ಜುಲೈ 27 ರಂದು ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ( Congress) ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ, ಸಿಎಂ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ಸಚಿವರು ಸೇರಿದಂತೆ ಕಾಂಗ್ರೆಸ್ನ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ಸಚಿವರ ವಿರುದ್ದ ಶಾಸಕರು ಅಸಮಾಧಾನ ವ್ಯಕ್ತಪಡಿಸಿ, ಸಿಎಂ ಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬೆನ್ನಲ್ಲೇ ಸಭೆ ಕರೆದಿದ್ದು, ಸಭೆ ಮಹಳ ಮಹತ್ವದ್ದಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ . ಸಚಿವರು, ಶಾಸಕರು ಹಾಜರಿರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.