ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಿನ್ನೆ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಒಂದು ವಾರದಲ್ಲೇ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 70 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿಕೊಂಡಂತಾಗಿದೆ.
ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 26 ರ ಬುಧವಾರ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ 70 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾದಂತಾಗಿದೆ ಎಂದು ವರದಿಯಾಗಿದೆ.
ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ನೋಂದಣಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವಡೆ ಸರ್ವರ್ ಸಮಸ್ಯೆ ಉಂಟಾಗುತ್ತಿದೆ.