HomeKarnatakaBIG NEWS: ತೀವ್ರಗೊಂಡ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ; ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ...

BIG NEWS: ತೀವ್ರಗೊಂಡ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ; ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗೃಹ ಸಚಿವರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಭದ್ರತೆಯನ್ನು ಲೆಕ್ಕಿಸದೇ ಬ್ಯಾರಿಕೇಡ್ ಗಳನ್ನು ತಳ್ಳಿ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಮುನ್ನುಗ್ಗಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿನಿಯರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಇರುವ ಜಾಲವನ್ನು ಪತ್ತೆ ಮಾಡದೇ ಆರೋಪಿಗಳ ಬಗ್ಗೆ ಸರ್ಕಾರ ಮೃಧು ಧೋರಣೆ ತಳೆಯುತ್ತಿರುವುದು ಅಪಾಯಕಾರಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಬಿಜೆಪಿಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular