ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅಂತರ್ಜಾಲ ತಾಣ https://shp.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿ ಎಸ್.ಆರ್.ಸುರೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.