
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಎರಡು ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ.
ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಆಗಸ್ಟ್ 17ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಬೆಳಗಾವಿ ಮತ್ತು ಕಲಬುರಗಿಯಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

 
		 
		 
		 
		 Loading ...
 Loading ... 
		 
		 
		