HomeKarnatakaಪಿಯುಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆ ಅವೈಜ್ಞಾನಿಕ: ಉಪನ್ಯಾಸಕರಿಂದ ಶಿಕ್ಷಣ ಸಚಿವರಿಗೆ ಪತ್ರ

ಪಿಯುಸಿ ವಿದ್ಯಾರ್ಥಿಗಳಿಗೆ 2ನೇ ಪೂರಕ ಪರೀಕ್ಷೆ ಅವೈಜ್ಞಾನಿಕ: ಉಪನ್ಯಾಸಕರಿಂದ ಶಿಕ್ಷಣ ಸಚಿವರಿಗೆ ಪತ್ರ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಎರಡು ಪೂರಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಅವೈಜ್ಞಾನಿಕವಾಗಿದೆ ಮತ್ತು ಅಪ್ರಯೋಜಕವಾಗಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಕುರಿತಾಗಿ ರಾಜ್ಯ ಪದವಿ ಪೂರ್ವ ಕಾಲೇಜುಗಳು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಸ್. ನಿಂಗೇಗೌಡ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಪ್ರಥಮ, ದ್ವಿತೀಯ ಕಿರುಪರೀಕ್ಷೆ, ಮಧ್ಯವಾರ್ಷಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ಮತ್ತು ಪೂರಕ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸುವ ಒತ್ತಡ ಉಪನ್ಯಾಸಕರ ಮೇಲಿದ್ದು, ಇನ್ನೊಂದು ಪೂರಕ ಪರೀಕ್ಷೆ ನಡೆಸುವ ಮೂಲಕ ವರ್ಷ ಪೂರ್ತಿ ಪರೀಕ್ಷೆ ಮೌಲ್ಯಮಾಪನ ನಡೆಸುತ್ತಾ ಹೋದರೆ ವಿದ್ಯಾರ್ಥಿಗಳಿಗೆ ಪಠ್ಯಬೋಧನೆ ಮಾಡುವುದು ಪ್ರಾಯೋಗಿಕವಾಗಿ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಪದವಿ ಪೂರ್ವ ಕಾಲೇಜುಗಳಲ್ಲಿ 4,073 ಉಪನ್ಯಾಸಕರು, ಅನುದಾನಿತ ಪಿಯು ಕಾಲೇಜುಗಳಲ್ಲಿ 2500 ಉಪನ್ಯಾಸಕರ ಕೊರತೆ ಇದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆ ನಡೆಸುತ್ತಿರುವುದು ಚಿಂತನೆ ಮರುಪರಿಶೀಲಿಸಬೇಕೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular