HomeKarnatakaಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: 3 ತಿರುವಿನಲ್ಲಿ ಬಿರುಕು, ರಸ್ತೆ ಕುಸಿತ ಹಿನ್ನಲೆ ಭಾರೀ...

ಆಗುಂಬೆ ಘಾಟಿ ಮೂಲಕ ಸಂಚರಿಸುವವರ ಗಮನಕ್ಕೆ: 3 ತಿರುವಿನಲ್ಲಿ ಬಿರುಕು, ರಸ್ತೆ ಕುಸಿತ ಹಿನ್ನಲೆ ಭಾರೀ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲದೇ ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿದ್ದು, ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರೀ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶಿಸಿದ್ದಾರೆ.

ಸೆ. 15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿದ್ದು, ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಚಲಿಸುವ ಭಾರೀ ವಾಹನಗಳು ತೀರ್ಥಹಳ್ಳಿ –ಆಗುಂಬೆ –ಶೃಂಗೇರಿ –ಮಾಳಾಘಾಟ್ –ಕಾರ್ಕಳ -ಉಡುಪಿ ಮಾರ್ಗ ಹಾಗೂ ತೀರ್ಥಹಳ್ಳಿ –ಮಾಸ್ತಿಕಟ್ಟೆ –ಸಿದ್ದಾಪುರ –ಕುಂದಾಪುರ -ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular