HomeKarnatakaBIG NEWS: ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ

BIG NEWS: ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು ಮಾಹಿತಿ ನೀಡಿದ್ದಾರೆ.

ನೈಸ್ ಸಂಸ್ಥೆ ಅಕ್ರಮದ ಬಗ್ಗೆ ವರದಿ ನೀಡಿದ ಬೆನ್ನಲ್ಲೇ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಿರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೈಸ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಮನವಿ ಮೇರೆಗೆ ರಾಮನಗರ ಜಿಲ್ಲೆಯ ಬಿಡದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವರದಿ ನೀಡಿದ್ದೆ. ಇದಾದ ಬಳಿಕ ಬೆದರಿಕೆ ಕರೆಗಳು ಬರುತ್ತಿದ್ದು, ರೈತರಂತೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನಿಮಗೂ ನೈಸ್ ಸಂಸ್ಥೆ ಹಗರಣಕ್ಕೂ ಏನು ಸಂಬಂಧ? ಯಾಕೆ ಬರುತ್ತೀರಾ ಎಂದು ಆವಾಜ್ ಹಾಕಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular