ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ,
ಗಾಂಧಿ ಭವನದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಕರ್ನಾಟಕಕ್ಕೆ ಜನಪರ ಶಿಕ್ಷಣ ನೀತಿ ರೂಪಿಸಲು ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಸಚಿವರು ಮಾತನಾಡಿದರು,
ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದುಮ ತಮಗೆ ಬೇಕಾದ ರೀತಿಯಲ್ಲಿ ಹೊಸದಾಗಿ ಪದಗಳುಮ ವಾಕ್ಯ ಸೇರ್ಪಡೆ ಮಾಡಿದ್ದಾರೆ. ತಮಗೆ ಬೇಕಾದಂತೆ ಪಠ್ಯ ಸಿದ್ಧಪಡಿಸಿ ಮಕ್ಕಳಿಗೆ ನೀಡಿದ್ದಾರೆ. ಇಂತಹ ಆಕ್ಷೇಪಾರ್ಹ ಅಂಶಗಳನ್ನು ಗುರುತಿಸಲಾಗಿದೆ ಎಂದರು.
ನಾನು ಸಚಿವನಾಗುವ ಮೊದಲೇ ಶೈಕ್ಷಣಿಕ ವರ್ಷ ಆರಂಭವಾಗಿ ಮಕ್ಕಳಿಗೆ ಪಠ್ಯಪುಸ್ತಕ ತಲುಪಿತ್ತು. ಈ ವರ್ಷ ಸಂಪೂರ್ಣವಾಗಿ ಪಠ್ಯಪುಸ್ತಕ ಬದಲಾವಣೆ ಸಾಧ್ಯವಾಗದ ಒಂದು ಪಾಠ ಬದಲಾಯಿಸಲಾಗಿದೆ. ತಜ್ಞರ ಸಮಿತಿ ರಚಿಸಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲೇ ಪಠ್ಯ ಪುಸ್ತಕದಲ್ಲಿನ ಆಕ್ಷೇಪಾರ್ಹ ಅಂಶಗಳನ್ನು ಕೈ ಬಿಡಲಾಗುವುದು ಎಂದು ತಿಳಿಸಿದ್ದಾರೆ.