ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ತರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿ ನಿಯಂತ್ರಿಸಲು ಶೀಘ್ರವೇ ಹೊಸ ಕಾನೂನು ಜಾರಿಗೆ ತರಲಾಗುವುದು . ಈ ಬಗ್ಗೆ ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕಾನೂಕು ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ. ಶೀಘ್ರವೇ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕಾನೂನು ತರುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.