
ಅಲ್ಪಾವಧಿಯಲ್ಲಿ ಬೆಳೆಯುವ ರಾಗಿ, ಹುರುಳಿ, ಜೋಳ ಸೇರಿದಂತೆ ಅಗತ್ಯ ಬಿತ್ತನೆ ಬೀಜ ಪೂರೈಸಲು ತೀರ್ಮಾನಿಸಲಾಗಿದ್ದು, ಶುಕ್ರವಾರದಂದು ಹಿರಿಯ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಈ ವಿಷಯ ತಿಳಿಸಿದ್ದಾರೆ.
ಮಳೆ ಕೊರತೆ ಕಾರಣಕ್ಕೆ ರಾಜ್ಯದಲ್ಲಿ ಈವರೆಗೆ ಶೇ.53ರಷ್ಟು ಬಿತ್ತನೆಯಾಗಿದ್ದು, ಮುಂದಿನ 15 ದಿನಗಳಲ್ಲಿ ಶೇ.100 ರಷ್ಟು ಬಿತ್ತನೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ರೈತರು ಬಿತ್ತನೆ ಬೀಜವನ್ನು ರೈತ ಕೇಂದ್ರ ಅಥವಾ ಇಲಾಖೆಯಿಂದ ಪಡೆಯಬಹುದಾಗಿದೆ ಎಂದು ಹೇಳಿದರು.

