HomeKarnatakaGood News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ'...

Good News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ’ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳನ್ನು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿ ಮುಂಭಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ನಿಗಮದಲ್ಲಿ 2016 ರಲ್ಲಿ ಸಿಬ್ಬಂದಿ ನೇಮಕಾತಿ ಮಾಡಲಾಗಿತ್ತು. ಸುಮಾರು 8 ವರ್ಷಗಳಿಂದ ನೇಮಕಾತಿಯೇ ಮಾಡಿಲ್ಲ. ಹೀಗಾಗಿ ಹೊಸದಾಗಿ ಸಿಬ್ಬಂದಿ ನೇಮಕಾತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಸಮ್ಮತಿಸಿದ ಕೂಡಲೇ ಚಾಲಕರು, ನಿರ್ವಾಹಕರು ಹಾಗೂ ಮೆಕ್ಯಾನಿಕ್ ಗಳುಸೇರಿ 13 ಸಾವಿರ ಸಾರಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕು ನಿಗಮಗಳಲ್ಲಿ ಇನ್ನು ಒಂದು ವರ್ಷದ ಅವಧಿಯಲ್ಲಿ 5 ಸಾವಿರ ಹೊಸ ಬಸ್ ಗಳನ್ನು ಖರೀದಿ ಮಾಡಲಾಗುವುದು. ಬಜೆಟ್ ನಲ್ಲಿ 5,000 ಕೋಟಿ ರೂ.ಮೀಸಲಿಡಲಾಗಿದೆ. ಹೊಸದಾಗಿ ಬಿಎಂಟಿಸಿಗೆ 1 ಸಾವಿರ ಬಸ್ ಸೇರಿ ನಾಲ್ಕು ನಿಗಮಕ್ಕೆ 5 ಸಾವಿರ ಬಸ್ ಗಳನ್ನು ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular